×
Ad

ಉಡುಪಿ ಜಿಲ್ಲಾಸ್ಪತ್ರೆಯ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ

Update: 2021-05-15 21:07 IST

ಉಡುಪಿ, ಮೇ 15: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಫಾರ್ಮಾಸಿಸ್ಟ್-4 ಹುದ್ದೆಗಳನ್ನು ಹಾಗೂ ಗ್ರೂಪ್ ಡಿ/ ಸೆಕ್ಯೂರಿಟಿ ಗಾರ್ಡ್-10 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಮೇ 19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ, ಆಧಾರ್ ಕಾರ್ಡ್ ಪ್ರತಿ ಹಾಗೂ ಸೇವಾ ಅನುಭವವಿದ್ದಲ್ಲಿ ದಾಖಲೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2530333ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News