ಕೋವಿಡ್ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ನೋಂದಣಿ ಕಡ್ಡಾಯ

Update: 2021-05-15 15:48 GMT

ಉಡುಪಿ, ಮೇ 15: ಕೋವಿಡ್ ಸಾಂಕ್ರಾಮಿಕ ರೋಗ ದಿನೇ ದಿನೇ ಉಲ್ಬಣ ಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಆರೋಗ್ಯ ಸೇವಾಕರ್ತರ ಬಹು ಮುಖ್ಯ ಹೊಣೆಯಾಗಿದೆ.

ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಗೂಡಿ ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಬೇಕಾಗಿದ್ದು, ಕೋವಿಡ್-19 ನಿಂದ ಬಳಲುತ್ತಿರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅವಶ್ಯಕ ವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನೊಂದಿಗೆ ನೋಂದಾವಣೆ ಮಾಡಿ ಕೊಳ್ಳಬೇಕು.

ವೆಬ್‌ಸೈಟ್ -https://sast.karnataka.gov.in-ಮೂಲಕ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳಬೇಕು. ವೆಬ್‌ಸೈಟ್‌ಗೆ ಭೇಟಿ ನೀಡಿ - New empanelment request  - ಅನ್ನು ಕ್ಲಿಕ್ ಮಾಡಿ, ಇದರಲ್ಲಿ ಕೋರಲಾದ ಆಸ್ಪತ್ರೆಯ ವಿವರಗಳನ್ನು ಭರ್ತಿ ಮಾಡಿ, ಅವಶ್ಯಕ ದಾಖಲೆ ಗಳೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ನಂತರ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಸಂಸ್ಥೆಯ ಕೋರಿಕೆಯನ್ನು ಪರಿಶೀಲಿಸಿ ಆನ್‌ಲೈನ್ ಮೂಲಕವೇ ಅನುಮೋದನೆ ನೀಡುತ್ತದೆ. ಆದ್ದರಿಂದ ಎಲ್ಲಾ ಖಾಸಗಿ ಆಸ್ಪತ್ರೆಗಳು ನೋಂದಾವಣೆ ಮಾಡಿಕೊಳ್ಳುವ ಮೂಲಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವಾಗಬೇಕು. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ -http://arogya.karnataka.gov.in/sast/- ಅಥವಾ ಟೋಲ್ ಫ್ರೀ ಸಂಖ್ಯೆ: 1800 425 8330 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News