ಕೋವಿಡ್ ಹಿನ್ನೆಲೆ: ವಿಕಲಚೇತನ ಸಿಬ್ಬಂದಿಗೆ ಕರ್ತವ್ಯದಿಂದ ವಿನಾಯಿತಿ ನೀಡಿದ ನ್ಯಾಯಾಲಯ

Update: 2021-05-15 15:49 GMT

ಬೆಂಗಳೂರು, ಮೇ 15: ರಾಜ್ಯ ವ್ಯಾಪ್ತಿಯ ಜಿಲ್ಲಾ ನ್ಯಾಯಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ಮತ್ತು ಅಂಧ ನೌಕರರು ಲಾಕ್‍ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಇತ್ತೀಚಿಗೆ ರಾಜ್ಯ ವಿಕಲಚೇತನರ ಹಕ್ಕುಗಳ ಆಯೋಗವೂ ವಿಕಲಚೇತನ ಮತ್ತು ಅಂಧ ನೌಕರರು ಸಾಂಕ್ರಾಮಿಕ ಸಮಯದಲ್ಲಿ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಬೇಕೆಂದು ಕೋರಿ ಹೈಕೋರ್ಟ್ ಗೆ ಮೇ 5ರಂದು ಲಿಖಿತವಾಗಿ ಮನವಿ ಸಲ್ಲಿಸಿತ್ತು.

ಇದರನ್ವಯ ಮುಖ್ಯ ನ್ಯಾಯಮೂರ್ತಿ ಎಸ್.ಎಸ್.ಓಕ ಅವರ ಆದೇಶದ ಮೇರೆಗೆ ಹೈಕೊರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಅವರು ಲಾಕ್‍ಡೌನ್ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿಸಿ ನೀಡಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News