ಕಾಂಗ್ರೆಸ್ ಸಂಸದ ರಾಜೀವ್ ಸತವ್ ನಿಧನ

Update: 2021-05-16 07:21 GMT

ಮುಂಬೈ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ  ರಾಜ್ಯಸಭಾ ಸಂಸದ,  ರಾಹುಲ್ ಗಾಂಧಿಯವರ ಆಪ್ತ ರಾಜೀವ್ ಸತವ್ ಅವರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು.

46 ವರ್ಷದ ಸತವ್‌ಗೆ ಕಳೆದ ತಿಂಗಳು ಕೋವಿಡ್‌ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಕಳೆದ 23 ದಿನಗಳಿಂದ ಪುಣೆಯ ಜೆಹಂಗೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದರು. ಆದರೆ ನ್ಯುಮೋನಿಯಾದಿಂದ  ಬಳಲುತ್ತಿದ್ದರು ಎಂದು ನಗರ ಕಾಂಗ್ರೆಸ್ ವಕ್ತಾರ ರಮೇಶ್ ಅಯ್ಯರ್ ಹೇಳಿದ್ದಾರೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಹಿರಿಯ ನಾಯಕರಾದ ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ನಾಯಕರು ರಾಜೀವ್ ಚಿಕಿತ್ಸೆ ಪಡೆಯುತ್ತಿದ್ದ  ಆಸ್ಪತ್ರೆಯೊಂದಿಗೆ  ನಿರಂತರ ಸಂಪರ್ಕದಲ್ಲಿದ್ದರು  ಎಂದು ಅವರು ಹೇಳಿದರು.

ಸತವ್  2014 ರಲ್ಲಿ ಮಹಾರಾಷ್ಟ್ರದ ಹಿಂಗೋಲಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಆದರೆ 2019 ರಲ್ಲಿ ಸ್ಪರ್ಧಿಸಲಿಲ್ಲ. ಆದಾಗ್ಯೂ, ಕಾಂಗ್ರೆಸ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿತು. ಅವರು ಮಾಜಿ ರಾಜ್ಯ ಸಚಿವ ರಜನಿ ಸತವ್ ಅವರ ಪುತ್ರ.

ಸತವ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು ಹಾಗೂ  ಗುಜರಾತ್‌ನಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ವಹಿಸಿದ್ದರು.

ಈ ಹಿಂದೆ ಅವರು ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅವರು ಉನ್ನತ ಶಿಕ್ಷಣವನ್ನು ಪುಣೆಯಲ್ಲಿ ಪಡೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News