×
Ad

ಕರಾವಳಿಯಲ್ಲಿ ಚಂಡಮಾರುತ: ಗೃಹ ಸಚಿವರಿಂದ ಮಾಹಿತಿ ಪಡೆದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ

Update: 2021-05-16 15:21 IST

ಬೆಂಗಳೂರು,  ಮೇ 16: ರಾಜ್ಯದ ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಸಂಭವಿಸಿದ ಹಾನಿ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಜೆ.ಪಿ. ನಡ್ಡಾ ಜೊತೆ ವಿಡಿಯೊ ಸಂವಾದದಲ್ಲಿ ಬಸವರಾಜ ಬೊಮ್ಮಾಯಿ ಭಾಗವಹಿಸಿದರು. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿನ ಸದ್ಯದ ಸ್ಥಿತಿಯ ಬಗ್ಗೆ ವಿವರಣೆ ನೀಡಿದ ಬೊಮ್ಮಾಯಿ, ‘ಚಂಡಮಾರುತ ಎದುರಿಸಲು ರಾಜ್ಯ ಸರ್ಕಾರ ಸರ್ವ ರೀತಿಯಲ್ಲಿಯೂ ಸಜ್ಜಾಗಿದೆ’ ಎಂದು ತಿಳಿಸಿದರು.

 ‌‘ಚಂಡಮಾರುತ ಎದುರಿಸಲು ಒಟ್ಟು ಒಂದು ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ಕರಾವಳಿಯ ಮೂರೂ ಜಿಲ್ಲೆಗಳಿಗೆ ನಿಯೋಜಿಸಲಾಗಿದೆ’ ಎಂದೂ ಬೊಮ್ಮಾಯಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News