ತೌಕ್ತೆ ಚಂಡಮಾರುತ: ಬೆಂಗಳೂರು ಸೇರಿದಂತೆ ಹಲವಡೆ ಮಳೆ

Update: 2021-05-16 13:13 GMT

ಬೆಂಗಳೂರು, ಮೇ 16: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದಾಗಿ ಬೆಂಗಳೂರು ಸುತ್ತಮುತ್ತಲೂ ಮೋಡ ಮುಸುಕಿದ ವಾತಾವರಣವಿದ್ದು, ತುಂತುರು ಮಳೆ ಸುರಿಯುತ್ತಿದೆ.

ಈಗಾಗಲೇ ಮೇ 18ರ ವರೆಗೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು, ಚಂಡಮಾರುತದಿಂದ ಪರಿಣಾಮ ಎರಡು ದಿನಗಳ ಕಾಲ ಬೆಂಗಳೂರು ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News