​ದ.ಕ. ಜಿಲ್ಲೆ : ಕೋವಿಡ್‌ಗೆ 7 ಮಂದಿ ಬಲಿ; 957 ಮಂದಿಗೆ ಕೊರೋನ ಪಾಸಿಟಿವ್

Update: 2021-05-16 15:36 GMT

ಮಂಗಳೂರು, ಮೇ 16: ದ.ಕ. ಜಿಲ್ಲೆಯಲ್ಲಿ ರವಿವಾರ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 815ಕ್ಕೇರಿದೆ. ಅಲ್ಲದೆ ರವಿವಾರ ಜಿಲ್ಲೆಯಲ್ಲಿ 957 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,638 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರಗೆ 8,05,019 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,40,705 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 64,314 ಮಂದಿ ಕೊರೋನ ಪಾಸಿಟಿವ್‌ಗೊಳಗಾಗಿದ್ದಾರೆ. ಈ ಪೈಕಿ 50,993 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,506 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಸ್ಕ್ ನಿಯಮ ಉಲ್ಲಂಸಿದ 54,686 ಮಂದಿಯಿಂದ 57,10,930 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News