ಮೆಟ್ರಿಕ್-ನಂತರದ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Update: 2021-05-17 14:00 GMT

ರಾಮನಗರ, ಮೇ 17: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನಸಿರ್ಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಸಲ್ಲಿಸಲು ಮೇ 31 ಕೊನೆಯ ದಿನಾಂಕವಾಗಿದೆ.

ಅರ್ಜಿಯನ್ನು www.ssp.postmatric.karnataka.gov.in ವೆಬ್‍ಸೈಟ್ ಮೂಲಕ ಸಲ್ಲಿಸಿಬಹುದು, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಆದೆಶಗಳ ಬಗ್ಗೆ www.bcwd.karnataka.gov.in ವೆಬ್ ಸೈಟ್ ಮೂಲಕ ಮಾಹಿತಿ ತಿಳಿಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 080-27276047, ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ 8050770005  ಅಥವಾ 8050770004 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ 080-35254757 ಅನ್ನು ಸಂಪರ್ಕಿಸುವುದು ಎಂದು ರಾಮನಗರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News