ಕೊರೋನ ಸೋಂಕಿತರು ತಿರುಗಾಡಿದರೆ ಕ್ರಿಮಿನಲ್ ಮೊಕದ್ದಮೆ: ಉಡುಪಿ ಜಿಲ್ಲಾಧಿಕಾರಿ

Update: 2021-05-17 16:23 GMT

ಉಡುಪಿ, ಮೇ 17: ಜಿಲ್ಲೆಯಲ್ಲಿ ಕೊರೋನ ಸೋಂಕಿತರು ಹೊರಗಡೆ ತಿರುಗಾಡುತ್ತಿರುವ ಬಗ್ಗೆ ಹಲವು ದೂರುಗಳು ಬರುತ್ತಿದ್ದು, ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕೋವಿಡ್ ಕೇರ್ ಸೆಂಟರ್‌ಗೆ ವರ್ಗಾಯಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಪ್ರತಿದಿನ 1000-1200 ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿದ್ದು, ಪಾಸಿಟಿವಿಟಿ ಪ್ರಮಾಣ ಕಡಿಮೆ ಆಗುತ್ತಿಲ್ಲ. ಯಾಕೆಂದರೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕುಗಳು ಕಂಡುಬರುತ್ತಿವೆ. ಆದುದರಿಂದ ಕೊರೋನ ಸೋಂಕಿತರಿಗೆ ತಮ್ಮ ಮನೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್‌ನಲ್ಲಿ ಉಳಿದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಉಡುಪಿ, ಕುಂದಾಪುರ, ಕಾರ್ಕಳದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ಸೋಂಕಿತರು ಅಲ್ಲಿ ಬಂದರೆ ಅವರ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿಯನ್ನು ಜಿಲ್ಲಾಡಳಿತ ತೆಗೆದುಕೊಳ್ಳಲಿದೆ. ಆದುದರಿಂದ ಸೋಂಕಿತರು ತಮ್ಮ ಮನೆಯವರಿಗೆ ತೊಂದರೆ ಆಗದೆ ಇರಲು ಕೋವಿಡ್ ಕೇರ್ ಸೆಂಟರ್‌ಗೆ ಆಗಮಿಸಬೇಕೆಂದು ಎಂದು ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News