ಪುತ್ತೂರು; ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ: ಚಾಲಕ ಸ್ಥಳದಲ್ಲಿಯೇ ಮೃತ್ಯು

Update: 2021-05-18 07:53 GMT

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಎಂಬಲ್ಲಿ ಮಂಗಳವಾರ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿ ಅರುಣ್ (38) ಮೃತರು ಎಂದು ತಿಳಿದುಬಂದಿದೆ. 

ಅರುಣ್ ಅವರು ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಮಂಡಳಿ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್‍ಐ ರಾಮನಾಯ್ಕ ಮತ್ತು ಸಿಬ್ಬಂದಿ ತೆರಳಿ ಮಾಹಿತಿ ಪಡೆದುಕೊಂಡರು.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News