ಅಶ್ರಫ್ ಸಂಪ್ಯ

Update: 2021-05-18 09:58 GMT

ಪುತ್ತೂರು: ಎರಡು ತಿಂಗಳ ಹಿಂದಷ್ಟೇ ವಿವಾಹಿತರಾಗಿದ್ದ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ ಅಬ್ದುಲ್ ಅಝೀಝ್ ಕಿನ್ನಿಜಾಲು ಅವರ ಪುತ್ರ ಮಹಮ್ಮದ್ ಅಶ್ರಫ್ ಸಂಪ್ಯ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.

ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿಯನ್ನು ಹೊಂದಿದ್ದ ಅಶ್ರಫ್ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಂದೆ, ತಾಯಿ, ಪತ್ನಿ, ಓರ್ವ ಸಹೋದರ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ