'ಬ್ಲ್ಯಾಕ್‌ ಫಂಗಸ್'ಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

Update: 2021-05-18 10:34 GMT

ಬೆಂಗಳೂರು, ಮೇ 18: ಕೋವಿಡ್‌ನಿಂದ ಚೇತರಿಸಿಕೊಂಡ ಕೆಲವರಿಗೆ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು (ಬ್ಲ್ಯಾಕ್‌ ಫಂಗಸ್) ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಪ್ಪು ಶಿಲೀಂಧ್ರ ಸೋಂಕನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News