ಹಳ್ಳಿಗಳಿಗೆ ವೈದ್ಯರ ತಂಡ ಯೋಜನೆ ರಾಜ್ಯವ್ಯಾಪ್ತಿ ಜಾರಿ: ಸಚಿವ ಆರ್.ಅಶೋಕ್

Update: 2021-05-18 12:15 GMT

ಉಡುಪಿ, ಮೇ 18: ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಾರಿಗೆ ತಂದಿರುವ ಹಳ್ಳಿಯ ಕಡೆ ವೈದ್ಯರ ತಂಡ ಪೈಲೆಟ್ ಯೋಜನೆಯನ್ನು ಇಡೀ ರಾಜ್ಯದಲ್ಲಿ ಜಾರಿಗೆ ತರಲು ಕ್ರಮ ತೆಗೆದುಕೊಳ್ಳಲಾಗು ವುದು. ಈ ಬಗ್ಗೆ ಆದೇಶ ನೀಡುವಂತೆ ರಾಜ್ಯ ಪ್ರಿನ್ಸಿಪಾಲ್ ಸೆಕ್ರೆಟರಿಗೆ ಸೂಚನೆ ನೀಡಲಾಗುವುದೆಂದು ರಾಜ್ಯ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತದಿಂದ ಹಾನಿಯಾಗಿರುವ ಮರವಂತೆ ಪ್ರದೇಶಕ್ಕೆ ಮಂಗಳ ವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಉಡುಪಿ ಜಿಪಂ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡುತಿದ್ದರು.

ಪ್ರತಿ ತಾಲೂಕಿನಲ್ಲಿ 15 ವೈದ್ಯರು, 40 ನರ್ಸಿಂಗ್ ಸಿಬ್ಬಂದಿಗಳನ್ನೊಂಡ ತಂಡವು 15 ವಾಹನಗಳನ್ನು ಬಳಸಿಕೊಂಡು ಪ್ರತಿ ಎರಡು ದಿನಗಳಿ ಗೊಮ್ಮೆ ಹಳ್ಳಿಗಳಿಗೆ ಹೋಗಿ ಜನರ ಪರೀಕ್ಷೆ ಮಾಡಬೇಕು. ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡುವುದಲ್ಲದೆ, ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆ ಗಳಲ್ಲಿ ದಾಖಲಿಸಲು ವ್ಯವಸ್ಥೆ ಮಾಡಬೇಕು ಎಂದರು.

ಇದರಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗು ವುದು. ಈ ತಂಡಕ್ಕೆ ಒಂದು ತಿಂಗಳಿಗೆ ಬೇಕಾದ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಜರ್, ಗ್ಲೌಸ್, ಆಕ್ಸಿ ಮೀಟರ್ ಸೇರಿದಂತೆ ಎಲ್ಲ ಸೌಲಭ್ಯ ಗಳನ್ನು ನೀಡಲಾಗುವುದು. ಪ್ರತಿ ತಂಡ ಒಂದು ಹಳ್ಳಿಗೆ ವಾರಕ್ಕೆ ಮೂರು ಬಾರಿ ಕಡ್ಡಾಯವಾಗಿ ಹೋಗ ಬೇಕು ಎಂದು ಅವರು ತಿಳಿಸಿದರು.

ಶಾಶ್ವತ ಪರಿಹಾರಕ್ಕೆ ಕ್ರಮ: ತೌಕ್ತೆ ಚಂಡಮಾರುತದಿಂದ ಉಡುಪಿ ಜಿಲ್ಲೆಯಲ್ಲಿ ಸುಮಾರು 68.19 ಕೋಟಿ ರೂ. ನಷ್ಟ ಉಂಟಾಗಿರುವ ಬಗ್ಗೆ ಅಂದಾಜಿಸಲಾಗಿದೆ. ಕರಾವಳಿ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಚಂಡಮಾರುತದಿಂದ ತಡೆಗೋಡೆಗಳು, ರಸ್ತೆಗಳು ಸಂಪೂರ್ಣ ಕೊಚ್ಚಿಕೊಂಡು ಹೋಗಿ ಸಮುದ್ರ ಪಾಲಾಗಿದೆ. ಈ ಕುರಿತು ಕೂಡಲೇ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕೆ ಬೇಕಾದ ಹಣವನ್ನು ಎನ್‌ಡಿ ಆರ್‌ಎಫ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಮನೆಗೆ ನೀರು ನುಗ್ಗಿದವರಿಗೆ 10ಸಾವಿರ ರೂ., ಮನೆಗೆ ಭಾಗಶಃ ಹಾನಿಯಾಗಿ ದ್ದರೆ 1ಲಕ್ಷ ರೂ., ಸಂಪೂರ್ಣ ಕುಸಿತವಾಗಿದ್ದರೆ 5ಲಕ್ಷ ರೂ. ಪರಿಹಾರ ನೀಡುವ ಬಗ್ಗೆಯೂ ಆದೇಶ ನೀಡಲಾಗುವುದು. ಮನೆಗೆ ನೀರು ನುಗ್ಗಿದವರಿಗೆ ಎರಡು ದಿನಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ತಡೆಗೋಡೆ ಬೇಕಾದ ಕಲ್ಲುಗಳನ್ನು ಒದಗಿಸುವ ನಿಟ್ಟಿನಲ್ಲಿ ಕಲ್ಲು ಗಣಿಗಾರಿಕೆಗೆ ವಿಧಿಸಲಾದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿ ಸುವಂತೆ ಗಣಿ ಸಚಿವ ನಿರಾಣಿ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಸುನೀಲ್ ಕುಮಾರ್, ಲಾಲಾಜಿ ಆರ್.ಮೆಂಡನ್, ಸುಕುಮಾರ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಸದಾ ಶಿವ ಪ್ರಭು, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

ಲಾಕ್‌ಡೌನ್ ಮುಂದುವರೆಸುವುದು ಉತ್ತವು

ಲಾಕ್‌ಡೌನ್ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಲಾಗಿದೆ. ಲಾಕ್‌ಡೌನ್ ಮುಂದುವರೆಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಮುಖ್ಯಮಂತ್ರಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.

ಈಗಾಗಲೇ ಲೌಕ್‌ಡೌನ್ ಆಗಿರುವ ಮಹಾರಾಷ್ಟ್ರ, ದೆಹಲಿಯಲ್ಲಿ ಇಂದು ಕೊರೋನ ಪ್ರಕರಣಗಳು ಕಡಿಮೆ ಆಗುತ್ತಿವೆ. ಬೆಂಗಳೂರು ಸೇರಿದಂತೆ ನಗರ ಪ್ರದೇಶವನ್ನು ಬಿಟ್ಟು ಜನ ಹಳ್ಳಿಗಳಿಗೆ ತೆರಳಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶ ಗಳಲ್ಲಿ ಕೊರೋನ ಪ್ರಕರಣಗಳು ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News