ಕೇರಳದ ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

Update: 2021-05-20 10:43 GMT
Photo: twitter.com/vijayanpinarayi

ತಿರುವನಂತಪುರ: ಕೇರಳ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪಿಣರಾಯಿ ವಿಜಯನ್ ಗುರುವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು.

ಎಪ್ರಿಲ್-ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಲ್ ಡಿಎಫ್  140 ಸ್ಥಾನಗಳಲ್ಲಿ 99 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರ ಗದ್ದುಗೆ ಏರಿ ಇತಿಹಾಸ ರಚಿಸಿತ್ತು.

ತಿರುವನಂತಪುರದ  ಸೆಂಟ್ರಲ್ ಸ್ಟೇಡಿಯಂನಲ್ಲಿ ಕೋವಿಡ್ ಶಿಷ್ಟಾಚಾರಗಳೊಂದಿಗೆ ಪ್ರಮಾಣವಚನ ಸಮಾರಂಭ ನಡೆಯಿತು.

ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್  ಅವರು 76 ವರ್ಷದ ವಿಜಯನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಕೊರೊನಾ ವೈರಸ್ ಪ್ರಕರಣಗಳಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್-ಯುಡಿಎಫ್ ನಾಯಕರು ಸಮಾರಂಭದಿಂದ ದೂರ ಉಳಿದಿದ್ದರು.

ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಸಮಾರಂಭದಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ನಿರ್ಬಂಧಿಸುವಂತೆ ಕೇರಳ ಹೈಕೋರ್ಟ್ ಬುಧವಾರ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News