ಕೇರಳದಲ್ಲಿ ಮೇ 30 ರ ತನಕ ಲಾಕ್‌ಡೌನ್ ವಿಸ್ತರಣೆ
Update: 2021-05-21 19:34 IST
ತಿರುವನಂತಪುರ: ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಪ್ರಕಟಿಸಿದ್ದಾರೆ.
ಕೋವಿಡ್ -19 ಟೆಸ್ಟ್ ಪಾಸಿಟಿವಿಟಿ ದರ ಹಾಗೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿರುವ ಕಾರಣ ತಿರುವನಂತಪುರ, ಎರ್ನಾಕುಲಂ ಹಾಗೂ ತ್ರಿಶೂರ್ ಜಿಲ್ಲೆಗಳಲ್ಲಿ ವಿಧಿಸಲಾದ ಟ್ರಿಪಲ್ ಲಾಕ್‌ಡೌನ್ ಅನ್ನು ನಾಳೆಯಿಂದ ಹಿಂಪಡೆಯಲಾಗುವುದು ಎಂದು ಅವರು ಹೇಳಿದರು.
ಆದಾಗ್ಯೂ, ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.