×
Ad

ಮೇ 22 ರಂದು ಕೋವಿಡ್ ಲಸಿಕೆ ಪಡೆಯಲು ಸೂಚನೆ

Update: 2021-05-21 20:09 IST

ಉಡುಪಿ, ಮೇ 21: ಜಿಲ್ಲೆಯಲ್ಲಿ ಸದ್ಯ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟವರು/ಆರೋಗ್ಯ ಕಾರ್ಯಕರ್ತರು/ಕೊರೋನ ಮುಂಚೂಣಿ ಕಾರ್ಯಕರ್ತರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆ ಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 22 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಗ್ರಾಮೀಣ ಪ್ರದೇಶದ ಸರಕಾರಿ ಆಸ್ಪತ್ರೆಗಳಲ್ಲಿ ಮಾ.30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆ ಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 22 ರಂದು ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ಮೇ 22 ರಂದು ಉಡುಪಿ ನಗರ ಪ್ರದೇಶದ ಸರಕಾರಿ ಆಸ್ಪತ್ರೆಗಳಲ್ಲಿ ಮಾ.30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ (ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡ, ಅಲಂಕಾರ ಥಿಯೇಟರ್ ಬಳಿ) (150 ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (100 ಡೋಸ್) ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ (140 ಡೋಸ್) ಲಸಿಕೆ ಲಭ್ಯವಿರುತ್ತದೆ.

ಬೆಳಗ್ಗೆ 9:30ರಿಂದ ಅಪರಾಹ್ನ 2 ಗಂಟೆಯವರೆಗೆ ಈ ಲಸಿಕೆಯನ್ನು ನೀಡಲಾಗುವುದು. 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ಎಸ್‌ಎಂಎಸ್ ಕಳುಹಿಸಲಾಗುವುದು. ಎಸ್‌ಎಂಎಸ್ ಬಂದವರು ಆಸ್ಪತ್ರೆಗೆ ಬಂದು ಲಸಿಕೆಯನ್ನು ಪಡೆದುಕೊಳ್ಳಬಹುದು.

ವಿಕಲಚೇತನರಿಗೆ: ಮೇ 22ರಂದು ಉಡುಪಿ ನಗರ ಪ್ರದೇಶದ ಅಂಗವಿಕಲತೆ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಹೊಂದಿರುವ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಸೇಂಟ್ ಸಿಸಿಲಿ ಶಾಲೆಯ ಲಸಿಕಾ ಕೇಂದ್ರದಲ್ಲಿ ಬೆಳಗ್ಗೆ 9:30ರಿಂದ ಸಂಜೆ 4:00 ಗಂಟೆಯವರೆಗೆ ಕೋವಿಶೀಲ್ಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದು. ಆಧಾರ್ ಕಾರ್ಡ್ ಮತ್ತು ಸರಕಾರದಿಂದ ನೀಡಲ್ಪಟ್ಟ ಅಂಗವಿಕಲರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಲಸಿಕಾ ಕೇಂದ್ರದಲ್ಲಿ ಹಾಜರುಪಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News