ಕೋವಿಡ್ ಲಸಿಕೆ ಮಾರಾಟ ಆರೋಪ: ಡಾ.ಎಂ.ಕೆ.ಪುಷ್ಪಿತಾ ಕರ್ತವ್ಯದಿಂದ ಬಿಡುಗಡೆ
Update: 2021-05-21 23:25 IST
ಬೆಂಗಳೂರು, ಮೇ 21: ಇಲ್ಲಿನ ಮಂಜುನಾಥ ನಗರ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆಯನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದ ಆರೋಪದಡಿ ಡಾ.ಎ.ಕೆ.ಪುಷ್ಪಿತಾ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಿಬಿಎಂಪಿ ಆಯುಕ್ತರು ಆದೇಶಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಮಂಜುನಾಥನಗರ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಎಂ.ಕೆ.ಪುಷ್ಪಿತಾ, ಕೋವಿಡ್ ಲಸಿಕೆಯನ್ನು ಮಾರಾಟ ಮಾಡುತ್ತಿರುವುದರ ಬಗ್ಗೆ ಪೊಲೀಸರು ಮಾಹಿತಿ ಪಡೆದು ಸದರಿ ವೈದ್ಯರನ್ನು ಸಾಕ್ಷಿ ಸಮೇತರಾಗಿ ದಸ್ತಗಿರಿ ಮಾಡಿರುತ್ತಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ಕರ್ತವ್ಯ ಲೋಪವನ್ನು ಪರಿಗಣಿಸಿ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.