ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್
Update: 2021-05-22 00:01 IST
ಮುಂಬೈ, ಮೇ 23: ಸಿಆರ್ಪಿಸಿ ನಿಬಂಧನೆಗಳ ಅಡಿಯಲ್ಲಿ 34 ದಿನಗಳ ಗೃಹಬಂಧನದ ಅವಧಿಯನ್ನು ಕಸ್ಟಡಿ ಎಂದು ಪರಿಗಣಿಸಲು ಸಾಧ್ಯವಿಲ್ಲದೇ ಇರುವುದರಿಂದ ಭೀಮಾ ಕೋರೇಗಾಂವ್ನ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿತ ಸಾಮಾಜಿಕ ಹೋರಾಟಗಾರ ಗೌತಮ್ ನವ್ಲಾಖಾ ಅವರು ಜಾಮೀನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಿಆರ್ಪಿಸಿ 167ರ ಅಡಿಯಲ್ಲಿ ಗೃಹಬಂಧನವನ್ನು ಕಸ್ಟಡಿ ಎಂದು ಪರಿಗಣಿಸುವಂತಿಲ್ಲ ಎಂದು ದಿಲ್ಲಿ ನ್ಯಾಯಾಲಯ ಆದೇಶ ಜಾರಿ ಮಾಡಿದೆ ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಕೆ.ಎಂ. ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ ಪ್ರತಿಪಾದಿಸಿದೆ. ಅಲ್ಲದೆ, ನವ್ಲಾಖಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.