ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖ ಎಂಬ ಸುಳ್ಳು ಭರವಸೆ ನೀಡುತ್ತಿದೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು : ರಾಜ್ಯ ಸರಕಾರ ಕೊರೋನ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವಂತೆ ಮಾಡುತ್ತಿದೆ. ಸರ್ಕಾರದ ಈ ನಿರ್ಧಾರ ಕೊಲೆಗಡುಕತನದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಸಿಎಂ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಅವರ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸುತ್ತೋಲೆ ಸಾಕ್ಷಿ ಎಂದು ಅವರು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸುತ್ತೋಲೆಯನ್ನು ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಕೊರೋನ ಸೋಂಕು ಕಡಿಮೆಯಾಗುತ್ತಿದೆ ಎಂಬ ಸಿಎಂ ಯಡಿಯೂರಪ್ಪ ಅವರ ಸುಳ್ಳು ಪ್ರಚಾರಕ್ಕೆ ರೋಗ ಲಕ್ಷಣಗಳಿಲ್ಲದವರ (ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಕರ್ನಾಟಕ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ಎಂದು ಸಿದ್ದರಾಮಯ್ಯ ಅವರು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.
ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ ಕೊರೋನ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕೊರೋನ ನಿಯಂತ್ರಣಕ್ಕೆ ಬರದೆ ಇರಲು ಕರ್ನಾಟಕ ಬಿಜೆಪಿ ಸರಕಾರದ ಮೂರ್ಖ ನಿರ್ಧಾರ ಕಾರಣ ಎಂದು ಹೇಳಿದ್ದಾರೆ.
ಮೇ ಮೊದಲ ವಾರದಲ್ಲಿ 49,000 ದಷ್ಟಿದ್ದ ಕೊರೋನ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಸಿಎಂ ಯಡಿಯೂರಪ್ಪ ಕೊಚ್ಚಿಕೊಂಡರು. ಆದರೆ, ಎಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೋನ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಸಿಎಂ ಯಡಿಯೂರಪ್ಪ ಅವರು ರೋಗ ಲಕ್ಷಣಗಳಿಲ್ಲದವರ ಕೊರೋನ ಪರೀಕ್ಷೆ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು ಒತ್ತಾಯಿಸುತ್ತೇನೆ. ಕೊರೋನವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೊರೊನಾ ಪರೀಕ್ಷೆ ಕಡಿಮೆಮಾಡಿ,
— Siddaramaiah (@siddaramaiah) May 22, 2021
ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ @BJP4Karnataka ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. @CMofKarnataka ಮತ್ತು @mla_sudhakar ಸುಳ್ಳುಗಳಿಗೆ
ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ.
1/5#Corona2ndWave pic.twitter.com/FdhKTjZVZO
ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ @CMofKarnataka ಅವರ ಸುಳ್ಳು ಪ್ರಚಾರಕ್ಕೆ ಕಾರಣ,
— Siddaramaiah (@siddaramaiah) May 22, 2021
ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ @BJP4Karnataka ಸರ್ಕಾರದ ಸುತ್ತೋಲೆ ಕಾರಣ.
ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ?
2/5#Corona2ndWave pic.twitter.com/496jhPymbX
ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ.
— Siddaramaiah (@siddaramaiah) May 22, 2021
ಲಾಕ್ ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು @BJP4Karnataka ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ.
3/5#Corona2ndWave pic.twitter.com/eSqwwzmZE5
ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ
— Siddaramaiah (@siddaramaiah) May 22, 2021
ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು @CMofKarnataka ಕೊಚ್ಚಿಕೊಂಡರು.
ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ,
ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ.
4/5 pic.twitter.com/bcKxKA4vIP
ಸುಳ್ಳು ಲೆಕ್ಕದಿಂದ
— Siddaramaiah (@siddaramaiah) May 22, 2021
ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ @CMofKarnataka ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು ಒತ್ತಾಯಿಸುತ್ತೇನೆ.
ಕೊರೊನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ.
5/5