ಇಮಾಮರಿಗೂ ಕೋವಿಡ್ ಪರಿಹಾರ ಘೋಷಿಸಲು ಆಗ್ರಹ

Update: 2021-05-23 12:18 GMT

ಬೆಂಗಳೂರು. ಮೇ 23: ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿರುವ ಲಾಕ್‌ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ನೀಡಿದಂತೆ ಮಸ್ಜಿದ್‌ಗಳ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ನ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿ ಆಗ್ರಹಿಸಿದ್ದಾರೆ.

ಮಸ್ಜಿದ್‌ಗಳ ಇಮಾಮರು ಮತ್ತು ಮುಅಝ್ಝಿನ್‌ಗಳು, ಚರ್ಚ್‌ನ ಪಾದ್ರಿಗಳ ಸಹಿತ ಇತರ ಧಾರ್ಮಿಕ ಕ್ಷೇತ್ರಗಳ ಸಿಬ್ಬಂದಿಗೆ ಯಾವುದೇ ಪರಿಹಾರ ಘೋಷಣೆ ಮಾಡದಿರುವುದು ರಾಜ್ಯ ಸರಕಾರದ ಧಾರ್ಮಿಕ ಅಸಹಿಷ್ಣುತೆಯನ್ನು ಎತ್ತಿ ತೋರಿಸುತ್ತದೆ. ಸರಕಾರವು ಮಾನವೀಯತೆಯ ತಳಹದಿಯಲ್ಲಿ ಪರಿಹಾರ ಘೋಷಣೆ ಮಾಡಬೇಕೇ ಹೊರತು ಧರ್ಮಾಧರಿತ ರಾಜಕೀಯದ ಆಧಾರದಲ್ಲಿ ಅಲ್ಲ. ಎಲ್ಲಾ ಧಾರ್ಮಿಕ ಕ್ಷೇತ್ರಗಳ ಸಿಬ್ಬಂದಿಯನ್ನು ಸಮಾನವಾಗಿ ಕಾಣುವುದರ ಜೊತೆಗೆ ಅವರಿಗೆ ನ್ಯಾಯವನ್ನು ಖಾತರಿಪಡಿಸಬೇಕು.ಲಾಕ್‌ಡೌನ್‌ನಿಂದಾಗಿ ಅತಂತ್ರರಾಗಿರುವ ಈ ಸಿಬ್ಬಂದಿಗೆ ಸರಕಾರವು ತಕ್ಷಣಕ್ಕೆ ಜಾರಿಯಾಗುವಂತೆ ಪರಿಹಾರ ಘೋಷಿಸಿ ಅವರ ಸಂಕಷ್ಟಕ್ಕೆ ನೆರವಾಗಬೇಕು. ಪರಿಹಾರ ಬಿಡುಗಡೆಗಾಗಿ ರಾಜ್ಯ ವಕ್ಫ್ ಬೋರ್ಡ್ ಕೂಡ ಸರಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News