ಶಿವಮೊಗ್ಗ: ಲಸಿಕೆ ಕೇಂದ್ರದಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Update: 2021-05-23 18:09 GMT

ಶಿವಮೊಗ್ಗ, ಮೇ 23: ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ರವಿವಾರ ಮಾತಿನ ಜಟಾಪಟಿ ನಡೆಯಿತು.

ಸೌರಭ ಸಂಸ್ಥೆಯ ಮೂಲಕ ಆ್ಯಂಬುಲೆನ್ಸ್ ಸೇವೆ ನೀಡಲಾಗುತ್ತಿದ್ದು, ಬಿಜೆಪಿಯವರು ಇವರಿಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.

ಬಿಜೆಪಿಯವರು ಶಿಫಾರಸು ಮಾಡಿ ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ. ಇದರಿಂದ ಸರದಿಯಲ್ಲಿ ನಿಂತ ಜನರಿಗೆ ತೊಂದರೆ ಆಗುತ್ತಿದೆ. ಅವರಿಗೆ ಲಸಿಕೆ ಸಿಗುತ್ತಿಲ್ಲ. ಎಲ್ಲೆಲ್ಲಿಂದಲೋ ಬಂದು ವಾಪಸ್ ಹೋಗುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಹಲವು ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದೆ. ಅದಕ್ಕೆ ಬಿಜೆಪಿಯವರೆಂದು ಹೇಳಿಕೊಂಡಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ವಿರುದ್ಧ ಆಪಾದಿಸಿದ್ದಾರೆ.

ಸಾರ್ವಜನಿಕರಿಗೆ ಕಿರಿಕಿರಿ: ಬೆಳಗ್ಗೆ 9ರಿಂದ ಟೋಕನ್ ನೀಡುತ್ತಿದ್ದು, 10ರಿಂದ ಲಸಿಕೆ ನೀಡಲಾಗುವುದು ಎಂದು ಜಿಲ್ಲಾ ತರಬೇತಿ ಕೇಂದ್ರದ ಮುಂದೆ ಸ್ಪಷ್ಟ ಸೂಚನೆ ಕೂಡ ಅಂಟಿಸಲಾಗಿದೆ. ಆದರೂ ಪಕ್ಷಗಳೆರಡರ ನಡುವಿನ ಮುಸುಕಿನ ಗುದ್ದಾಟದಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿದೆ. ಸಾರ್ವಜನಿಕರು ಸಹ ಬೆಳಗ್ಗೆ 6 ಗಂಟೆಯಿಂದಲೇ ಸರದಿಯಲ್ಲಿ ಬಂದು ನಿಲ್ಲುತ್ತಿದ್ದಾರೆ. ಲಸಿಕೆಯಲ್ಲಿಈ ರೀತಿಯ ಹಸ್ತಕ್ಷೇಪ ತಡೆಯುವುದಕ್ಕಾಗಿಯೇ ಆನ್ಲೈನ್ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಲಸಿಕೆ ನೀಡುವ ಯೋಜನೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News