ಹೆಬ್ರಿ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್ ಯಂತ್ರ ಕೊಡುಗೆ

Update: 2021-05-24 15:02 GMT

ಹೆಬ್ರಿ, ಮೇ 24: ಪೊಲೀಸ್ ಇಲಾಖೆ ವತಿಯಿಂದ ನೀಡಿದ ಕಾರ್ಕಳ ನಕ್ಸಲ್ ನಿಗ್ರಹ ಪಡೆಗೆ ಆಕ್ಸಿಜನ್ ಕನ್‌ಸೆನ್ಟ್ರೆಟರ್ ಯಂತ್ರವನ್ನು ನಕ್ಸಲ್ ಪೀಡಿತ ಪ್ರದೇಶ ದಲ್ಲಿರುವ ಹೆಬ್ರಿಯ ಸರಕಾರಿ ಆಸ್ಪತ್ರೆಗೆ ಸೋಮವಾರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ನಕ್ಸಲ್ ನಿಗ್ರಹ ಪಡೆಯ ಡಿವೈಎಸ್ಪಿಜೈಶಂಕರ್, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೆದ್ಯಾಧಿಕಾರಿ ಡಾ.ಸಂತೋಷ್ ಕುಮಾರ್, ಎಎನ್‌ಎಫ್ ಅಧಿಕಾರಿಗಳಾದ ಸುನೀಲ್ ಕುಮಾರ್, ದೇಜಪ್ಪ, ವಸಂತ ಅಕ್ಕಸಾಲಿ ಮತ್ತು ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News