ಕಪ್ಪು ಶಿಲೀಂದ್ರ ಸೋಂಕು ಸಾಂಕ್ರಾಮಿಕ ರೋಗ: ಜಮ್ಮು ಕಾಶ್ಮೀರ ಸರಕಾರ ಘೋಷಣೆ

Update: 2021-05-24 19:04 GMT

ಶ್ರೀನಗರ: ಜಮ್ಮು ಹಾಗೂ ಕಾಶ್ಮೀರಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಮೊದಲ ಸಾವು ಸಂಭವಿಸಿದ ಬಳಿಕ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಕಪ್ಪು ಶಿಲೀಂಧ್ರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ್ದಾರೆ.

ಕಪ್ಪು ಶಿಲೀಂಧ್ರ ಸೋಂಕನ್ನು ಸಾಂಕ್ರಾಮಿಕ ರೋಗ ಕಾಯ್ದೆ 1897ರ ಅಡಿಯಲ್ಲಿ ಗಮನಾರ್ಹ ಕಾಯಿಲೆ ಎಂದು ಪರಿಗಣಿಸುವಂತೆ ಎಲ್ಲಾ ರಾಜ್ಯ ಸರಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಸೂಚಿಸಿದ ದಿನಗಳ ಬಳಿಕ ಅದು ಈ ನಿರ್ಧಾರ ತೆಗೆದುಕೊಂಡಿದೆ.

ಕೊರೋನ ಸೋಂಕಿನಿಂದ ಚೇತರಿಸಿಕೊಂಡ 40 ವರ್ಷದ ವ್ಯಕ್ತಿಯೋರ್ವರು ಕಪ್ಪು ಶಿಲೀಂಧ್ರ ಸೋಂಕಿನಿಂದ ಇಲ್ಲಿನ ಸರಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ (ಜಿಎಂಸಿಎಚ್)ಯಲ್ಲಿ ಶುಕ್ರವಾರ ಮೃತಪಟ್ಟಿದ್ದು, ಜಮ್ಮು ಹಾಗೂ ಕಾಶ್ಮೀರದಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಬಲಿಯಾದ ಮೊದಲ ವ್ಯಕ್ತಿ.

ಆಸ್ಪತ್ರೆಯಲ್ಲಿ 2020 ನವೆಂಬರ್ನಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಪ್ರಕರಣವೊಂದರ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇನ್ನೊಂದು ಶಂಕಿತ ಪ್ರಕರಣಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ರೀನಗರ ಸರಕಾರಿ ದಂತ ವೈದ್ಯಕೀಯ ಕಾಲೇಜಿನ ಓರಲ್ ಆ್ಯಂಡ್ ಮ್ಯಾಸ್ಸಿಲ್ಲೊಫೇಸಿಯಲ್ ಸರ್ಜರಿ ಘಟಕದ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News