ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ

Update: 2021-05-25 08:27 GMT

ಬೆಂಗಳೂರು, ಮೇ 25: ಬಿಬಿಎಂಪಿ ವಾರ್ ರೂಂನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಹಗರಣ ಸಂಬಂಧ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಎಂದು ಹೇಳಲಾಗುತ್ತಿರುವ ಬಾಬು ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಮಂಗಳವಾರ ಆತನನ್ನು ಸಿಸಿಬಿ‌ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿರುವ ಬಿಬಿಎಂಪಿ ಹಾಸಿಗೆಗಳನ್ನು ಬ್ಲಾಕ್ ಮಾಡುತ್ತಿದ್ದ ಆರೋಪಿಗಳು, 50 ಸಾವಿರಕ್ಕೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಕಲೆ ಹಾಕಿದ್ದ ಜಯನಗರ ಠಾಣ ಪೊಲೀಸರು, ಮೂವರನ್ನು ಬಂಧಿಸಿದ್ದರು. ಇದಾದ ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಸಿಬಿ, ಇಬ್ಬರು ವೈದ್ಯರು ಸೇರಿ ಮತ್ತಷ್ಟು ಮಂದಿಯನ್ನು ಬಂಧಿಸಿತ್ತು.

ಆ ನಂತರ ಸಿಸಿಬಿ ಎದುರು ಹಾಜರಾಗಿದ್ದ ಬಾಬು, ಬಳಿಕ ಕೋವಿಡ್ ಸೋಂಕಿನ‌ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದ. ಇದೀಗ ಆತ ಗುಣಮುಖವಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News