ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನ

Update: 2021-05-26 17:25 GMT

ಮಂಗಳೂರು, ಮೇ 26: ಮಂಗಳೂರು ವಿವಿಯ ಸ್ನಾತಕೋತ್ತರ ಕೇಂದ್ರವು ಚಿಕ್ಕ ಅಳುವಾರದಲ್ಲಿ ಯೋಗ ವಿಜ್ಞಾನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂಗ್ಲಿಷ್ ವಿಷಯದಲ್ಲಿ ಪ್ರಸ್ತುತ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಅಂಗೀಕೃತ ವಿವಿಯಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 50) ಅಂಕಗಳನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿವಿಯ ವೆಬ್‌ಸೈಟ್  ನಿಂದ ಪಡೆದು ಅಗತ್ಯ ದಾಖಲಾತಿಯೊಂದಿಗೆ ಕುಲಸಚಿವರ ಕಚೇರಿಯ devsectionmu@gmail.com ಮೂಲಕ ಮೇ 31ರೊಳಗೆ ಸಲ್ಲಿಸಬಹುದು.

ಮಾಹಿತಿಗಾಗಿ ಕುಲಸಚಿವರ ಕಚೇರಿಯ ದೂ.ಸಂ: 0824-2287276ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿವಿಯ ಕುಲಸಚಿವರ ಪ್ರಕಟನೆ ತಿಳಿಸಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News