ಉಡುಪಿ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಠಿ
Update: 2021-05-26 23:02 IST
ಉಡುಪಿ, ಮೇ 26: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೆಸರಿನಲ್ಲಿ ಎರಡನೇ ಬಾರಿಗೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಠಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಮೇ 26ರಂದು ಜಿ.ಜಗದೀಶ್ ಮಳಲಗದ್ದೆ ಎಂಬ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿಸಿ, ಅವರ ಫೋಟೋವನ್ನು ಪ್ರೊಫೈಲ್‌ಗೆ ಹಾಕಿ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಹಣ ಕೇಳಿ ಸಂದೇಶ ಕಳುಹಿಸಿದ್ದಾರೆ.
ಜಿಲ್ಲಾಧಿಕಾರಿಗಳ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಹೆಸರಿನಲ್ಲಿ ಕಳೆದ ಎಪ್ರಿಲ್ ತಿಂಗಳಲ್ಲಿ ಇದೇ ರೀತಿ ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಠಿಸಲಾಗಿತ್ತು.