ಬೆಳ್ತಂಗಡಿ: ಬ್ಲ್ಯಾಕ್ ಫಂಗಸ್ ಗೆ ವ್ಯಕ್ತಿಯೋರ್ವ ಬಲಿ

Update: 2021-05-28 05:46 GMT

ಬೆಳ್ತಂಗಡಿ, ಮೇ 28: ಬ್ಲ್ಯಾಕ್ ಫಂಗಸ್ ವೈರಸ್ ಇದೀಗ ಬೆಳ್ತಂಗಡಿ ತಾಲೂಕಿಗೂ ವಕ್ಕರಿಸಿದ್ದು, ಓರ್ವ ಸೋಂಕಿತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55) ಬ್ಲ್ಯಾಕ್ ಫಂಗಸ್ ವೈರಸ್‌ಗೆ ಬಲಿಯಾದವರು. ಕಣ್ಣು ಮತ್ತು ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ನೋಣಯ್ಯರನ್ನು ಕೆಲ ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ನೋಣಯ್ಯ ಪೂಜಾರಿಗೆ ಕೊರೋನ ಸೋಂಕು ಪಾಸಿಟಿವ್ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕಿಗೂ ಒಳಗಾಗಿದ್ದರು. ಈ  ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನೋಣಯ್ಯ ಪೂಜಾರಿ ಮೇ 27ರಂದು ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಕೊರೋನ ಸೋಂಕಿತರ ಸಂಖ್ಯೆಯೇ ಸಾಕಷ್ಟು ಸಂಖ್ಯೆಯಲ್ಲಿದ್ದು, ಇದೀಗ ಬ್ಲ್ಯಾಕ್ ಫಂಗಸ್   ರೋಗವೂ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಮೂಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News