ಕೋವಿಡ್-19:ಅಂತರ್ ರಾಷ್ಟ್ರೀಯ ವಿಮಾನ ಹಾರಾಟ ಮೇಲಿನ ನಿಷೇಧ ಜೂ.30ರ ತನಕ ವಿಸ್ತರಣೆ

Update: 2021-05-28 13:32 GMT

ಹೊಸದಿಲ್ಲಿ: ಕೊರೋನ ವೈರಸ್ ಕಾಟದಿಂದಾಗಿ ನಿಗದಿತ ಅಂತರ್ ರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟಕ್ಕೆ ವಿಧಿಸಲಾಗಿರುವ ನಿಷೇಧವನ್ನು  ಜೂನ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ವಾಯುಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ತಿಳಿಸಿದೆ.

"ಆದಾಗ್ಯೂ, ಆಯ್ದ ಮಾರ್ಗಗಳಲ್ಲಿ ಸಮರ್ಥ ಪ್ರಾಧಿಕಾರವು ಕೇಸ್-ಟು-ಕೇಸ್ ಆಧಾರದ ಮೇಲೆ ಅಂತರ್ ರಾಷ್ಟ್ರೀಯ ನಿಗದಿತ ವಿಮಾನಗಳ ಹಾರಾಟಕ್ಕೆ ಅನುಮತಿಸಬಹುದು" ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

ಕೊರೋನವೈರಸ್ ಸಾಂಕ್ರಾಮಿಕ ರೋಗದಿಂದಾಗಿ 2020 ರ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತರ್ ರಾಷ್ಟ್ರೀಯ ಪ್ರಯಾಣಿಕರ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಆದರೆ ವಿಶೇಷ ಅಂತರ್ ರಾಷ್ಟ್ರೀಯ ವಿಮಾನಗಳು ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಹಾಗೂ  ಜುಲೈ 2020 ರಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ "ಏರ್ ಬಬಲ್" ವ್ಯವಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಭಾರತವು ಅಮೆರಿಕ,  ಯುಎಇ, ಕೀನ್ಯಾ, ಭೂತಾನ್ ಹಾಗೂ  ಫ್ರಾನ್ಸ್ ಸೇರಿದಂತೆ ಸುಮಾರು 27 ದೇಶಗಳೊಂದಿಗೆ ಏರ್ ಬಬಲ್  ಒಪ್ಪಂದಗಳನ್ನು ರೂಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News