ಇನ್ನು ಮುಂದೆ 15 ದಿನಗಳಿಗೊಮ್ಮೆ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ: ಸಿಎಂ ಬಿಎಸ್‌ವೈ

Update: 2021-05-28 13:51 GMT

ಬೆಂಗಳೂರು, ಮೇ 28: `ಇನ್ನು ಮುಂದೆ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಗಳ ಪ್ರಗತಿ ಪರಿಶೀಲನೆಯನ್ನು ಇಂದಿನಿಂದಲೇ ಆರಂಭಿಸಿದ್ದೇನೆ. ಇಂದು ತುಮಕೂರಿನಲ್ಲಿ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ತುಮಕೂರು ಜಿಲ್ಲೆಯ ಕೊರೋನ ಸೋಂಕು ಪರಿಸ್ಥಿತಿ, ಅಭಿವೃದ್ಧಿ ಕಾರ್ಯಗಳ ಪ್ರಗತಿ ಸೇರಿದಂತೆ ಎಲ್ಲದರ ಬಗ್ಗೆಯೂ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತೇನೆ. ಇದೇ ಮಾದರಿಯಲ್ಲಿ ಮುಂದೆ 15 ದಿನಕ್ಕೊಮ್ಮೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡುವುದು ಎಂದು ಯಡಿಯೂರಪ್ಪ ವಿವರಣೆ ನೀಡಿದರು.

ರಾಜ್ಯದಲ್ಲಿ ಕೊರೋನ ಸೋಂಕಿನ ಕಾರಣದಿಂದ ಜಿಲ್ಲಾ ಪ್ರವಾಸ ಸಾಧ್ಯವಾಗಿರಲಿಲ್ಲ. ಇನ್ನು ಮುಂದೆ ಜಿಲ್ಲಾ ಪ್ರವಾಸ ನಡೆಸಿ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕು ಹಾಗೂ ಕ್ರಿಯಾಶೀಲವನ್ನಾಗಿಸುವುದು ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News