ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

Update: 2021-05-28 16:55 GMT

ಮಂಗಳೂರು ಮೇ 28: ರಾಜ್ಯಾದ್ಯಂತ ಕೋವಿಡ್-19ರ 2ನೇ ಅಲೆಯ ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ 3,000 ರೂ.ಗಳ ಆರ್ಥಿಕ ನೆರವನ್ನು ಪಡೆಯಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಅರ್ಜಿಯನ್ನು ಆಹ್ವಾನಿಸಿದೆ.

ವೃತ್ತಿ ನಿರತ 35 ವರ್ಷ ಮೇಲ್ಪಟ್ಟ ಮತ್ತು ಕನಿಷ್ಟ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (ಕಲಾಸೇವೆ ಮಾಡಿರುವ ಕನಿಷ್ಟ ಒಂದು ಪೋಟೊ ಲಗತ್ತಿಸಬೇಕು). ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರುವವರು, ರಾಜ್ಯ/ ಕೇಂದ್ರ/ ನಿಗಮ ಮಂಡಳಿ/ಸರಕಾರಿ ಅನುದಾನಿತ ಸಂಸ್ಥೆಗಳು/ಅರೆ ಸರಕಾರಿ ಸಂಸ್ಥೆಗಳ ನೌಕರರು ಅರ್ಜಿ ಸಲ್ಲಿಸುವಂತಿಲ್ಲ.

2020-21ನೇ ಸಾಲಿನ ಸಾಮಾನ್ಯ/ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಧನ ಸಹಾಯ ಪಡೆದವರು/ವಾದ್ಯ ಪರಿಕರ/ವೇಷಭೂಷಣ ಖರೀದಿ/ಶಿಲ್ಪಕಲೆ/ ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಪಡೆದವರು ಕೂಡ ಅರ್ಜಿ ಸಲ್ಲಿಸುವಂತಿಲ್ಲ.

ಅರ್ಹ ಕಲಾವಿದರು ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ (ಆಧಾರ್ ಕಾರ್ಡ್ ಲಗತ್ತಿಸಬೇಕು), ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ (ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟ ಲಗತ್ತಿಸಬೇಕು) ಇತ್ಯಾದಿ ವಿವರವುಳ್ಳ ಅರ್ಜಿಯನ್ನು ಜಿಲ್ಲೆಯಲ್ಲಿರುವ ಎಲ್ಲಾ ನಾಗರೀಕ ಸೇವಾ ಕೇಂದ್ರಗಳು ಅಥವಾ ಕಂಪ್ಯೂಟರ್/ಮೊಬೈಲ್ ಮೂಲಕ ಆನ್‌ಲೈನ್‌ನಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಕಡ್ಡಾಯವಾಗಿ ಭರ್ತಿ ಮಾಡಿ ಜೂನ್ 5ರೊಳಗೆ ಸಲ್ಲಿಸಬೇಕು.

ಮಾಹಿತಿಗಾಗಿ ಮೊ.ಸಂ:8861632030/7411345334 ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು (ಉರ್ವಸ್ಟೋರ್‌ನಲ್ಲಿರುವ ತುಳುಭವನ)ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News