ಜೂನ್ 5ರ ವೇಳೆಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ

Update: 2021-05-28 17:42 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 28: ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಈ ಕಾರಣದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 5ರ ವೇಳೆಗೆ ಮುಂಗಾರು ರಾಜ್ಯ ಪ್ರವೇಶಿಸುವ ನಿರೀಕ್ಷೆ ಇದೆ. ಹೀಗಾಗಿ, ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಹೇಳಿದೆ.

ಇನ್ನು ರಾಜ್ಯದಲ್ಲಿ ಮೇ 29ರವರೆಗೂ ಕೆಲವು ಕಡೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News