×
Ad

ಬೆಂಗಳೂರು: ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರು

Update: 2021-05-29 22:11 IST

ಬೆಂಗಳೂರು, ಮೇ 29: ಬಾಂಗ್ಲಾದೇಶ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಸಂತ್ರಸ್ತೆಯನ್ನು ತನಿಖಾಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯನ್ನು ಕೇರಳದ ಕಲ್ಲಿ ಕೋಟಿಯಲ್ಲಿ ಪತ್ತೆಹಚ್ಚಿರುವ ಪೊಲೀಸರು, ಶುಕ್ರವಾರ ರಾತ್ರಿ ನಗರಕ್ಕೆ ಕರೆತಂದರು. ಆ ನಂತರ, ಶನಿವಾರ ಆಕೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ, ಕೋವಿಡ್ ಸಂಬಂಧ ವಿಡಿಯೊ ಸಂವಾದ ಮೂಲಕ ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪ್ರಕ್ರಿಯಿಸಿದ ತನಿಖಾಧಿಕಾರಿವೊಬ್ಬರು, ಹಲ್ಲೆ, ಸಾಮೂಹಿಕ ಅತ್ಯಾಚಾರದ ಸಂಬಂಧ ಯುವತಿಯಿಂದ 164ರ ಅನ್ವಯ ಹೇಳಿಕೆ ದಾಖಲಿಸಲು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಜತೆಗೆ, ಸಂತ್ರಸ್ತ ಯುವತಿಯನ್ನು ವಿಚಾರಣೆಗೊಳಪಡಿಸಿ ಹಲವು ಮಾಹಿತಿಯನ್ನು ಕಲೆಹಾಕಲಾಗುತ್ತಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News