ಕೋವಿಡ್ ನಿಂದ ಆನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ: ಹೆಚ್.ಎಂ.ಎಸ್. ಶಿಕ್ಷಣ ಸಂಸ್ಥೆ ಘೋಷಣೆ

Update: 2021-05-29 17:29 GMT

ತುಮಕೂರು, ಮೇ 29: ಕೋವಿಡ್ ರೋಗದಿಂದ ತಂದೆ- ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಹೆಚ್.ಎಸ್.ಎಸ್.ಶಿಕ್ಷಣ ಸಂಸ್ಥೆ ಉಚಿತವಾಗಿ ಶಿಕ್ಷಣ ನೀಡಲು ಮುಂದಾಗಿದೆ ಎಂದು ಹೆಚ್.ಎಂ.ಎಸ್.ಶಿಕ್ಷಣ ಸಂಸ್ಥೆಯ ನಿರ್ದೇಶಕ ಹಾಗೂ ಮಾಜಿ ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್-19 ಸೋಂಕು ಜಾಗತಿಕವಾಗಿ ಹರಡಲು ಆರಂಭವಾದಾಗಿನಿಂದ ಜನರು ಅನೇಕ ಸಂಕಷ್ಟಗಳನ್ನು ಎದುರಿಸಿದ್ದಾರೆ. ಪೋಷಕರನ್ನು, ಅಣ್ಣ-ತಮ್ಮಂದಿರನ್ನು, ಮಡದಿ, ಮಕ್ಕಳನ್ನು, ಸ್ನೇಹಿತರನ್ನು ಸೇರಿದಂತೆ ಜೀವನಾಧಾರವಾಗಿದ್ದವರನ್ನು ಕಳೆದುಕೊಂಡಿದ್ದಾರೆ. ಇವರ ಸಂಕಷ್ಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಹೆಚ್.ಎಂ.ಎಸ್. ಶಿಕ್ಷಣ ಸಂಸ್ಥೆ ಅನಾಥ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದ ಇಂಜಿನಿಯರಿಂಗ್ ಪದವಿವರೆಗೂ ಉಚಿತ ಶಿಕ್ಷಣ ನೀಡಲು ಮುಂದಾಗಿದೆ. ಆಸಕ್ತರು ಇದರ ಉಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News