×
Ad

​ಉಡುಪಿ: ದಲಿತ ಹೋರಾಟಗಾರ, ಸಮಾಜ ಸೇವಕ ಸುಂದರ್ ಕಪ್ಪೆಟ್ಟು ನಿಧನ

Update: 2021-05-30 11:01 IST

ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ, ಭಾರತೀಯ ಜೀವವಿಮಾ ನಿಗಮದ ಕುಂದಾಪುರ ಶಾಖೆಯ ಉದ್ಯೋಗಿ ಸುಂದರ್ ಕಪ್ಪೆಟ್ಟು (52) ಅವರು ಕೋವಿಡ್19 ಸೋಂಕಿನಿಂದ ಇಂದು ನಿಧನ ಹೊಂದಿದರು.

ಅವರಿಗೆ ಕೆಲವು ದಿನಗಳ‌ ಹಿಂದೆ ಕೊರೋನ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸುಂದರ್ ಕಪ್ಪೆಟ್ಟು ಅವರು ಹಲವಾರು ದಲಿತ ಹೋರಾಟ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಅಲ್ಲದೆ, ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು.

ಅವರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News