×
Ad

ಬೆಳ್ತಂಗಡಿ : ವಿದ್ಯುತ್ ಶಾಕ್ ಹೊಡೆದು ತಾಯಿ, ಮಗು ಸ್ಥಳದಲ್ಲೇ ಮೃತ್ಯು

Update: 2021-05-30 13:30 IST

ಬೆಳ್ತಂಗಡಿ: ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪುಶೆಡ್ ನೊಳಗೆ ಸ್ವಿಚ್ ಹಾಕುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ ಪುಟ್ಟ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿದೆ.

ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ  ಗೀತಾ (30) ಹಾಗೂ ಅವರ ಪುತ್ರ ಭವಿಷ್ (4) ಮೃತಪಟ್ಟವರು.

ದನಗಳಿಗೆ ನೀರು ಕೊಡಲೆಂದು ಪಂಪುಶೆಡ್ ಗೆ ಹೋಗಿ ಸ್ವಿಚ್ ಹಾಕುವ ಸಂದರ್ಭದಲ್ಲಿ ಈ ದುಘ೯ಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News