×
Ad

'ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ' ಸುಳ್ಳು ಸುದ್ದಿ: ಉಡುಪಿ ಡಿಸಿ ಸ್ಪಷ್ಟನೆ

Update: 2021-05-30 18:00 IST

ಉಡುಪಿ, ಮೇ 30: ಕೋವಿಡ್‌ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರಕಾರದಿಂದ 4ಲಕ್ಷ ರೂ. ಪರಿಹಾರ ನೀಡುವಂತಹ ಯಾವುದೇ ಯೋಜನೆ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರಕಾರ ನಾಲ್ಕು ಲಕ್ಷ ರೂ. ಸಹಾಯಧನ ಪ್ರಕಟಿಸಿದ್ದು, ಇದನ್ನು ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿ ಯಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರೊಂದಿಗೆ ಅರ್ಜಿ ನಮೂನೆಯ ಪಿಡಿಎಫ್ ಪ್ರತಿ ಕೂಡ ಹಾಕಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ, ಈ ವಿಚಾರದಲ್ಲಿ ಸಾರ್ವ ಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದ್ದು, ಅಂತಹ ಯಾವುದೇ ಯೋಜನೆ ಇಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News