ಪ್ರಧಾನಿ ಮೋದಿ ಸರಕಾರದ ಏಳನೇ ವರ್ಷಾಚರಣೆ: ರಕ್ತದಾನ ಶಿಬಿರ
ಉಡುಪಿ, ಮೇ 30: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ ಯಶಸ್ವಿ ಎರಡನೇ ಅವಧಿಯ ಎರಡನೇ ವರ್ಷ ತುಂಬಿದ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ ವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಉದ್ಘಾಟಿಸಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿ ಯಶ್ಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷ ವೀಣಾ ಎಸ್. ಶೆಟ್ಟಿ, ಜಿಪಂ ಉಪಾಧ್ಯಕ್ಷ ಶೀಲಾ ಕೆ.ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅತ್ರಾಡಿ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಹಿಳಾ ಮೋರ್ಚಾದ ಅಧ್ಯಕ್ಷ ಸುಮಾ ಶೆಟ್ಟಿ, ಉಡುಪಿ ನಗರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಪತ್ಪಾಂಧವ ಸತೀಶ್ ಸಾಲ್ಯಾನ್, ಹಿಂದುಳಿದ ವರ್ಗ ಗಳ ಮೋರ್ಚಾದ ಉಡುಪಿ ನಗರ ಅಧ್ಯಕ್ಷ ವಿನಯ ಕಲ್ಮಾಡಿ, ಬಿಜೆಪಿ ನಗರ ಕಾರ್ಯದರ್ಶಿ ದಯಾಶಿನಿ ಮೊದಲಾದವರು ಉಪಸ್ಥಿತರಿದ್ದರು.
ಅಲೆವೂರಿನಲ್ಲೂ ಶಿಬಿರ: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಎರಡನೆ ಅವಧಿಯ ಎರಡನೇ ವರ್ಷದ ಆಚರಣೆ ಪ್ರಯುಕ್ತ ಅಲೆವೂರಿನಲ್ಲಿ ಏರ್ಪಡಿಸಲಾದ ರಕ್ತದಾನ ಶಿಬಿರ ವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉದ್ಘಾಟಿಸಿದರು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜಿಪಂ ಮಾಜಿ ಅಧ್ಯಕ್ಷ ದಿನಕರ ಬಾಬು, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ರಾಜ್ಯ ಫಲಾನುಭವಿಗಳ ಪ್ರಕೋಷ್ಠ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಜಿಪಂ ಮಾಜಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿಯ ವೈದ್ಯಾಧಿಕಾರಿ ಡಾ. ವೀಣಾ, ಬಿಜೆಪಿ ಜಿಲ್ಲಾ ಕಚೇರಿ ಕಾರ್ಯದರ್ಶಿ ಸತ್ಯಾನಂದ ನಾಯಕ್, ಉಪಸ್ಥಿತರಿದ್ದರು. ಒಟ್ಟು 65 ಮಂದಿ ರಕ್ತದಾನಗೈದರು.