×
Ad

ಆಡುಭಾಷೆ ಮರೆತರೆ ಮೂಲವನ್ನು ಮರೆತಂತೆ: ಡಿ.ವಿ. ಸದಾನಂದ

Update: 2021-05-30 20:18 IST

ಮಂಗಳೂರು, ಮೇ 30: ಜಾಗತೀಕರಣದ ಪ್ರಭಾವದಿಂದ ಇಂಗ್ಲಿಷ್ ಅನಿವಾರ್ಯ ಎಂಬಂತಾಗಿದೆ. ಇದರಿಂದ ತುಳು ಸಹಿತ ಹಲವು ಭಾಷೆಗಳು ನಲುಗುತ್ತಿವೆ. ಹೀಗಾಗಿ ತುಳುವರು ಮಾತೃಭಾಷೆಯನ್ನು ಮರೆತು ಮೂಲ ವನ್ನೇ ಮರೆಯಬಾರದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆಯ ವರ್ಷಾಚರಣೆಯ ಪ್ರಯುಕ್ತ ಶನಿವಾರ ಆನ್‌ಲೈನ್ ವೇದಿಕೆಯಲ್ಲಿ ಜರಗಿದ 52ನೇ ಸಂಚಿಕೆಯಲ್ಲಿ ವಿಶೇಷ ಅತಿಥಿಯಾಗಿ ಅವರು ಮಾತನಾಡಿದರು.

ಭಾಷೆ ನಮ್ಮ ಸಂಸ್ಕೃತಿ, ಆಚಾರ-ವಿಚಾರ, ಜೀವನ ಪದ್ಧತಿಯನ್ನು ಪ್ರತಿಬಿಂಬಿಸುತ್ತದೆ. ಭಾಷೆಯೊಂದರ ಅವನತಿ ದೇಶದ ಸಂಸ್ಕೃತಿಯ ಅವನತಿಯಿದ್ದಂತೆ. ರಾಜ್ಯ ಸರಕಾರ ತುಳು ಭಾಷೆಯನ್ನು ರಾಜ್ಯ ಭಾಷೆಯಾಗಿ ಗುರುತಿ ಸುವ ಅಗತ್ಯವಿದೆ ಎಂದು ಡಿ.ವಿ.ಸದಾನಂದ ಗೌಡ ನುಡಿದರು.

ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು, ಕನ್ನಡ ಮಾಧ್ಯಮಕ್ಕೆ ತುಳುವರ ಕೊಡುಗೆ ಅಪಾರ. ಭಾಷಾ ಶುದ್ಧತೆ, ತುಡಿತ, ಪ್ರಾಮಾಣಿಕತೆ, ಶ್ರಮ, ತಾಳ್ಮೆ, ಕಷ್ಟವನ್ನು ಎದುರಿಸಿ ಗೆದ್ದು ಬರುವ ಗುಣ ವನ್ನು ತುಳುವ ಮಣ್ಣು ಕಲಿಸಿದೆ. ಆದರೆ ಈಗ ಮಾಧ್ಯಮದಲ್ಲಿ ರಾಜಕೀಯ ಪ್ರವೇಶದಿಂದ ತುಳು ಪ್ರತಿಭೆಗಳು ಅವಕಾಶ ಕಳೆದುಕೊಳ್ಳುತ್ತಿರುವುದು ಬೇಸರದ ವಿಚಾರ ಎಂದರು.

ನ್ಯಾಯಾವಾದಿ ಎಂ.ಕೆ. ಸುವೃತ ಕುಮಾರ್, ಮಂಗಳೂರು ವಿವಿ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ., ವಿವಿ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ, ತುಳು ಪೀಠ ಮತ್ತು ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಉಪಸ್ಥಿತರಿದ್ದರು. ವಿಜಯಲಕ್ಷ್ಮಿ ಕಟೀಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News