ದ.ಕ. ಜಿಲ್ಲೆ : ಕೋವಿಡ್‌ಗೆ 7 ಬಲಿ; 651 ಮಂದಿಗೆ ಕೊರೋನ ಪಾಸಿಟಿವ್
Update: 2021-05-31 17:38 IST
ಮಂಗಳೂರು, ಮೇ 31: ದ.ಕ. ಜಿಲ್ಲೆಯಲ್ಲಿ ಸೋಮವಾರ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 913ಕ್ಕೇರಿದೆ. ಅಲ್ಲದೆ ಸೋಮವಾರ ಜಿಲ್ಲೆಯಲ್ಲಿ 651 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ 76,199 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ.
ಸೋಮವಾರ 840 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 66,153ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 9,133 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.