ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಿವೃತ್ತ ನ್ಯಾಯಾದೀಶ ಬಿ.ಎ. ಪಾಟೀಲ್ ರಿಂದ ತನಿಖೆ

Update: 2021-05-31 12:24 GMT

ಚಾಮರಾಜನಗರ: ರಾಜ್ಯ ಸರ್ಕಾರ ಆಮ್ಲಜನಕ ದುರಂತದ ಪ್ರಕರಣದ ತನಿಖೆ ನಡೆಸಲು ನೇಮಿಸಿರುವ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸರದಿಯ ತನಿಖೆ ಶುರುವಾಗಿದೆ.

ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಬಿ.ಎ.ಪಾಟೀಲ್  ಆಸ್ಪತ್ರೆಯ ಆ್ಯಕ್ಸಿಜನ್ ಪ್ಲಾಂಟ್, ಸಿಲಿಂಡರ್ ವ್ಯವಸ್ಥೆ ವೀಕ್ಷಿಸಿದರು. ಬಳಿಕ ಆಸ್ಪತ್ರೆಯ ಕಚೇರಿಯಲ್ಲಿ ವೈದ್ಯಾಕಾರಿಗಳಿಂದ ಹಲವು ಮಾಹಿತಿಗಳನ್ನು ಪಡೆದುಕೊಂಡರು.

ಹೈಕೋರ್ಟ್ ನೇಮಿಸಿದ್ದ ಸಮಿತಿ ಆಮ್ಲಜನಕ ದುರಂತ ಪ್ರಕರಣದ ಸತ್ಯಶೋಧನೆ ನಡೆಸಿ ಈಗಾಗಲೇ ವರದಿ ಸಲ್ಲಿಕೆಯಾಗಿದ್ದು, 28 ದಿನಗಳ ಬಳಿಕ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಆಸ್ಪತ್ರೆಗೆ ಆಗಮಿಸಿ ತನಿಖೆ ಸಂಬಂಧ ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾ ಸತ್ರ ನ್ಯಾಯಾಧೀಶ ಸದಾಶಿವ ಎಸ್ ಸುಲ್ತಾನ್ಪುರಿ, ಜಿಲ್ಲಾಕಾರಿ ಡಾ.ಎಂ.ಆರ್.ರವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ.ಎಂ.ಸಿ.ರವಿ, ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮತ್ತು ಇತರರಿದ್ದರು.

ಇದೇ ಪ್ರಕರಣಕ್ಕೆ ಸಂಬಂಸಿದಂತೆ ರಾಜ್ಯ ಸರ್ಕಾರ ಮೂರು ದಿನಗಳಲ್ಲಿ ವರದಿ ಸಲ್ಲಿಸಲು ಘಟನೆ ಜರುಗಿದ ಪ್ರಾರಂಭದಲ್ಲಿ ಕೆಎಸ್ಆರ್ಟಿಸಿ ಎಂಡಿ ಶಿವಯೋಗಿ ಕಳಸದ ಅವರನ್ನು ನೇಮಿಸಿತ್ತು. ಬಳಿಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲ್ ನೇತೃತ್ವದ ಸಮಿತಿ ರಚನೆ ಮಾಡಿತು. ಜತೆಗೆ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರನ್ನು ತನಿಖೆ ನಡೆಸಲು ನೇಮಿಸಿತು. ಹೀಗಾಗಿ ಶಿವಯೋಗಿ ಕಳಸದ ಸರ್ಕಾರಕ್ಕೆ ವರದಿ ಸಲ್ಲಿಸುವ ಸಂಬಂಧ ಸ್ಪಷ್ಟನೆ ಕೋರಿ ಪ್ರಕರಣದಿಂದ ಹಿಂದೆ ಸರಿದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News