ಉಡುಪಿ : ಸೋಮವಾರ 5525 ಮಂದಿಗೆ ಲಸಿಕೆ
Update: 2021-05-31 20:27 IST
ಉಡುಪಿ, ಮೇ 29: ಜಿಲ್ಲೆಯಲ್ಲಿ ಸೋಮವಾರ ಒಟ್ಟು 5525 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 5294 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 231 ಮಂದಿ ಎರಡನೇ ಡೋಸ್ ಪಡೆದಿ ದ್ದಾರೆ ಎಂದು ಡಿಎಚ್‌ಓ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು 18ರಿಂದ 44 ವರ್ಷದೊಳಗಿನ 2969 ಮಂದಿ ಮೊದಲ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 2211 ಮಂದಿ ಮೊದಲ ಡೋಸ್ ಹಾಗೂ 222 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 42 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 81 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ ಎಂದವರು ನುಡಿದರು.
ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 2,44,274 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 79,536 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಸೂಡ ತಿಳಿಸಿದರು.