×
Ad

ಜೂನ್ 1ರಂದು ಉಡುಪಿ ಜಿಲ್ಲೆಯಲ್ಲಿ ಲಸಿಕೆ ಲಭ್ಯತೆ ಮಾಹಿತಿ

Update: 2021-05-31 20:37 IST

ಉಡುಪಿ, ಮಾ.31: ಜಿಲ್ಲೆಯಲ್ಲಿ ಜೂ.1ರಂದು ಎಲ್ಲೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ. ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸರಕಾರಿ ಪ್ರಾಥಮಿಕ ಶಾಲೆ ಆದಿ ಉಡುಪಿಯಲ್ಲಿ (250 ಡೋಸ್), ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಸೇಂಟ್ ಸಿಸಿಲಿ ಶಾಲೆಯಲ್ಲಿ (250 ಡೋಸ್), ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆ ಯಲ್ಲಿ (400 ಡೋಸ್), ಕುಕ್ಕಿಕಟ್ಟೆಯ ಎಫ್‌ಪಿಎಐಯ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥುಕ ಶಾಲೆಯಲ್ಲಿ (100 ಡೋಸ್) ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತ /ದುರ್ಬಲ ಗುಂಪಿನ ಫಲಾನುಭವಿಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ಆರೋಗ್ಯ ಕಾರ್ಯರ್ಕತರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ (100 ಡೋಸ್) ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು/ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿ ಕೊಂಡು ಜೂನ್ 1ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು.

ರಾಜ್ಯ ಸರಕಾರ ಗುರುತಿಸಿರುವ ಆದ್ಯತಾ ಗುಂಪುಗಳಿಗೆ (ಅನುಬಂಧ-2 ರಲ್ಲಿರುವ) ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್‌ ಚಂದ್ರ ಸೂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News