ಎಪಿಎಂಸಿ, ಹಾಪ್ ಕಾಮ್ಸ್‌ಗೆ ನೋಡಲ್ ಅಧಿಕಾರಿಗಳ ನೇಮಕ
ಮಂಗಳೂರು, ಮೇ 31: ನಗರದ ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳನ್ನು ಎಪಿಎಂಸಿ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವ ಸಲುವಾಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರವೀಣ್, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಣಿ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಸಾರ್ವಜನಿಕರುಗಳು ಅಹವಾಲುಗಳನ್ನು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ. (ಮೊ.ನಂ. 9483908000) ಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ. ನೋಡಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳಿಗೆ ತಕ್ಷಣವೇ ಸ್ಪಂದಿಸಿ ಯಾವುದೇ ಗೊಂದಲ ಉಂಟಾಗದಂತೆ ಕ್ರಮ ಜರುಗಲಿಸಿದ್ದಾರೆ ಎಂದು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.