ಲಾಕ್‍ಡೌನ್ ವಿಸ್ತರಣೆ ತಜ್ಞರ ವರದಿ ಮೇಲೆ ನಿಂತಿದೆ: ಸಚಿವ ಆರ್. ಅಶೋಕ್

Update: 2021-05-31 17:18 GMT

ಬೆಂಗಳೂರು, ಮೇ 31: ಕೋವಿಡ್ ಸಂಬಂಧ ಜಾರಿಗೊಳಿಸಿರುವ ಲಾಕ್‍ಡೌನ್ ಅನ್ನು ಸಡಿಲಗೊಳಿಸಬೇಕೆ ಅಥವಾ ವಿಸ್ತರಣೆ ಮಾಡಬೇಕೆ ಎಂದು ತಜ್ಞರ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಲ್ಲಿ 500ಕ್ಕಿಂತ ಕಡಿಮೆ, ರಾಜ್ಯದಲ್ಲಿ 2 ಸಾವಿರ, 3 ಸಾವಿರಕ್ಕೂ ಕಡಿಮೆ ಪ್ರಕರಣಗಳು ವರದಿಯಾದರೆ ಮಾತ್ರ ಲಾಕ್‍ಡೌನ್ ಕೈಬಿಡುವ ಬಗ್ಗೆ ತೀರ್ಮಾನ ಮಾಡಬಹುದು ಎಂದು ಹೇಳಿದರು.

ಇನ್ನು, ರಾಜ್ಯದಲ್ಲಿಯೇ ಮೊದಲ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆಗೆ ತಯಾರಿ ಮಾಡುತ್ತಿದ್ದೇವೆ. ಪೂರ್ತಿ ವೈದ್ಯಕೀಯ ಸಲಕರಣೆಗಳು ಸೇರಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಸೋಂಕಿತರಿಗೆ ತುರ್ತು ಚಿಕಿತ್ಸಾ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿಎಸ್‍ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ 100 ಆಕ್ಸಿಜನೇಟೆಡ್ ಬೆಡ್‍ಗಳ ವ್ಯವಸ್ಥೆಯನ್ನ ಮೇಕ್ ಶಿಫ್ಟ್ ಆಸ್ಪತ್ರೆಯಲ್ಲಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News