×
Ad

ಭಾರತದಲ್ಲಿ 54 ದಿನಗಳ ಬಳಿಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

Update: 2021-06-01 10:50 IST

ಹೊಸದಿಲ್ಲಿ: ಭಾರತದಲ್ಲಿ ಮಂಗಳವಾರ ಬೆಳಗ್ಗೆ 1.27 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಎಪ್ರಿಲ್ 9ರ ಬಳಿಕ  ಮೊದಲ ಬಾರಿ ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.  ಕೋವಿಡ್-19 ಎರಡನೇ ಅಲೆಯ ವಿರುದ್ಧ ಹೋರಾಡುತ್ತಿರುವ ಭಾರತ ಇದೀಗ  ಪ್ರಕರಣಗಳ ಇಳಿಕೆಗೆ ಸಾಕ್ಷಿಯಾಗುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,795 ಜನರು ಕೊರೋನಕ್ಕೆ ಬಲಿಯಾಗಿದ್ದಾರೆ. ಭಾರತದಲ್ಲೀಗ ಒಟ್ಟು ಕೊರೋನ ಪ್ರಕರಣಗಳು 2.81 ಕೋಟಿಗೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿ-ಅಂಶದಿಂದ ತಿಳಿದುಬಂದಿದೆ.

ಭಾರತದಲ್ಲಿ ವಾರದಿಂದಿಚೆಗೆ ಪಾಸಿಟಿವಿಟಿ ರೇಟ್  ಶೇ.10ಕ್ಕಿಂತ ಕಡಿಮೆಯಾಗಿದೆ. ಮಂಗಳವಾರ ಬೆಳಗ್ಗೆ 6.6ಕ್ಕೆ ತಲುಪಿದೆ. ತಮಿಳುನಾಡಿನಲ್ಲಿ ದೇಶದಲ್ಲಿ ಅತ್ಯಂತ ಹೆಚ್ಚು ಸೋಂಕುಗಳು(27,936)ಪತ್ತೆಯಾಗಿವೆ,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News