ಬೈಂದೂರು ಪ.ಪಂ.ಗೆ ತಹಶೀಲ್ದಾರ್ ಆಡಳಿತಾಧಿಕಾರಿ
Update: 2021-06-01 19:56 IST
ಉಡುಪಿ, ಜೂ.1: ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್‌ಗೆ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಕರ್ನಾಟಕ ಪೌರ ಸಭೆಗಳ ಅಧಿನಿಯಮ 1964ರ ಸೆಕ್ಷನ್ 315 ರನ್ವಯ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಬೈಂದೂರು ಪಟ್ಟಣ ಪಂಚಾಯತ್‌ನ ಆಡಳಿತಾಧಿಕಾರಿಯನ್ನಾಗಿ ಬೈಂದೂರು ತಹಶೀಲ್ದಾರರನ್ನು ನೇಮಕ ಮಾಡಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.