ಉಡುಪಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
Update: 2021-06-01 20:04 IST
ಉಡುಪಿ, ಜೂ.1: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.