ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದ ಸ್ವಪನ್ ದಾಸ್ ಗುಪ್ತಾ ಸದನಕ್ಕೆ ಮರು ನಾಮನಿರ್ದೇಶನ
Update: 2021-06-01 20:08 IST
ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಮಾರ್ಚ್‌ನಲ್ಲಿ ಮೇಲ್ಮನೆಗೆ ರಾಜೀನಾಮೆ ನೀಡಿದ್ದ ಮಾಜಿ ರಾಜ್ಯಸಭಾ ಸಂಸದ ಸ್ವಪನ್ ದಾಸ್‌ಗುಪ್ತಾ ಅವರನ್ನು ಮತ್ತೆ ಸದನಕ್ಕೆ ನಾಮನಿರ್ದೇಶನ ಮಾಡಲಾಗಿದೆ ಎಂದು ಸರಕಾರದ ಅಧಿಸೂಚನೆ ತಿಳಿಸಿದೆ.
ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಮಾರ್ಚ್ 16 ರಂದು ದಾಸ್‌ಗುಪ್ತಾ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ದಾಸ್ ಗುಪ್ತಾ ಟಿಎಂಸಿ ಅಭ್ಯರ್ಥಿಯ ವಿರುದ್ದ ಸೋತಿದ್ದರು.
ಆದಾಗ್ಯೂ, ಸಂವಿಧಾನದ 10 ನೇ ಶೆಡ್ಯೂಲ್ ಪ್ರಕಾರ, ಸದನದ ನಾಮನಿರ್ದೇಶಿತ ಸದಸ್ಯರೊಬ್ಬರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದರೆ ಆರು ತಿಂಗಳ ಅವಧಿ ಮುಗಿದ ನಂತರ ಸದನದ ಸದಸ್ಯರಾಗಲು ಅವರನ್ನು ಅನರ್ಹಗೊಳಿಸಲಾಗುತ್ತದೆ.