ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲು
Update: 2021-06-01 20:14 IST
ಬೆಂಗಳೂರು, ಜೂ. 1: ತೀವ್ರ ಜ್ವರದಿಂದ ಬಳಲುತ್ತಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿನ್ನೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಕೊರೋನ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ನೆಗೆಟಿವ್ ಬಂದಿತ್ತು.
ಆ ಬಳಿಕ ಅವರು ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಜ್ವರ ಕಡಿಮೆ ಆಗದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.
ಇನ್ನು ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದಂತ ಎಲ್ಲ ಕಾರ್ಯಕ್ರಮಗಳನ್ನು ವೈದ್ಯರ ಸೂಚನೆಯ ಮೇರೆಗೆ ರದ್ದು ಪಡಿಸಲಾಗಿದೆ. ಈ ಮೊದಲು ಸಿದ್ದರಾಮಯ್ಯ ಕೊರೋನ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.