ದ.ಕ. ಜಿಲ್ಲೆ : ಕೋವಿಡ್‌ಗೆ 5 ಬಲಿ; 536 ಮಂದಿಗೆ ಕೊರೋನ ಪಾಸಿಟಿವ್
Update: 2021-06-01 20:23 IST
ಮಂಗಳೂರು, ಜೂ.1: ದ.ಕ. ಜಿಲ್ಲೆಯಲ್ಲಿ ಮಂಗಳವಾರ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 918ಕ್ಕೇರಿದೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 536 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 76,735ಕ್ಕೇರಿದೆ.
ಮಂಗಳವಾರ 1,172 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 67,325ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 8,492 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿ ದ್ದಾರೆ. ಜಿಲ್ಲೆಯಲ್ಲಿ ಈವರಗೆ 8,53,357 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,76,622 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 60,279 ಮಂದಿಯಿಂದ 71,10,617 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.